ಕರ್ನಾಟಕ

karnataka

ETV Bharat / state

ಬಾಗಲಕೋಟೆ: 152 ಸೋಂಕಿತ ಪ್ರಕರಣ,138 ಮಂದಿ ಗುಣಮುಖ - Bagalkote corona latest news

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಕೇಸ್‌ಗಳ ಮಾಹಿತಿ ಇಲ್ಲಿದೆ.

Bagalkote
Bagalkote

By

Published : Aug 29, 2020, 8:47 PM IST

ಬಾಗಲಕೋಟೆ : ಜಿಲ್ಲೆಯಲ್ಲಿ ಇಂದು ಹೊಸದಾಗಿ 152 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಕೋವಿಡ್ ಪ್ರಕರಣಗಳ ವಿವರ:

ಬಾಗಲಕೋಟೆ ತಾಲೂಕಿನಲ್ಲಿ 54, ಬಾದಾಮಿ 20, ಹುನಗುಂದ 23, ಬೀಳಗಿ 12, ಮುಧೋಳ 18, ಜಮಖಂಡಿ 24 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,910ಕ್ಕೆ ಏರಿಕೆಯಾಗಿದೆ.

ಮೃತರ ಮಾಹಿತಿ:

ಜಿಲ್ಲೆಯಲ್ಲಿಂದು ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದುವರೆಗೆ 73 ಜನರು ಮೃತಪಟ್ಟಿದ್ದಾರೆ.

ಗುಣಮುಖ :

ಇಂದು ಕೊರೊನಾ ಸೋಂಕಿನಿಂದ 138 ಮಂದಿ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ ಒಟ್ಟು 4,991 ಮಂದಿ ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 846 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ ವಿವರ:
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 455 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 309 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 56,876 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 50,202 ನೆಗೆಟಿವ್ ಪ್ರಕರಣ, 5,910 ಪಾಸಿಟಿವ್ ಪ್ರಕರಣ ವರದಿಯಾಗಿರುತ್ತದೆ.

ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್‌ಮೆಂಟ್‌ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನಲ್‌ ಕ್ವಾರಂಟೈನ್‌ನಲ್ಲಿದ್ದ 8,638 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details