ಕರ್ನಾಟಕ

karnataka

ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿಂದು 152 ಜನರಿಗೆ ಕೊರೊನಾ ಸೋಂಕು : 54 ಮಂದಿ ಗುಣಮುಖ - covid 19 updates

ಬಾಗಲಕೋಟೆ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ. ಎಷ್ಟು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

Bagalkote
Bagalkote

By

Published : Sep 19, 2020, 8:06 PM IST

ಬಾಗಲಕೋಟೆ :ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 152 ಜನರಿಗೆ ಕೊರೊನಾ ಸೋಂಕು ತಗುಲದೆ. ಈ ದಿನ 54 ಮಂದಿ ಗುಣಮುಖರಾಗಿದ್ದಾರೆ.

ತಾಲೂಕುವಾರು ಕೋವಿಡ್ ವಿವರ :

ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 83, ಬಾದಾಮಿ 10, ಹುನಗುಂದ 24, ಬೀಳಗಿ 10, ಮುಧೋಳ 13, ಜಮಖಂಡಿ 12 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9,139 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ :

ಜಿಲ್ಲೆಯಲ್ಲಿ ಈ ದಿನ 54 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 7,785 ಮಂದಿ ಗುಣಮುಖರಾಗಿದಂತಾಗಿದೆ.

ಮೃತರ ಮಾಹಿತಿ:

ಜಿಲ್ಲೆಯಲ್ಲಿ ಕೊರೊನಾ‌ ಸೋಂಕಿನಿಂದ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್ ಪರೀಕ್ಷೆ ಮಾಹಿತಿ :

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 87,370 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 74,683 ನೆಗೆಟಿವ್ ಪ್ರಕರಣ, 9139 ಪಾಸಿಟಿವ್ ಪ್ರಕರಣಗಳು ವರದಿಯಾಗಿರುತ್ತದೆ.

ಇನ್ನು 1236 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 714 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details