ಬಾಗಲಕೋಟೆ :ಜಿಲ್ಲೆಯಲ್ಲಿ ಇಂದು ಹೊಸದಾಗಿ 164 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಇಂದು ತಾಲೂಕಿನಲ್ಲಿ 25, ಬಾದಾಮಿ 41, ಹುನಗುಂದ 7, ಬೀಳಗಿ 9, ಮುಧೋಳ 28, ಜಮಖಂಡಿ 51 ಹಾಗೂ ಬೇರೆ ಜಿಲ್ಲೆಯ ಮೂವರ ಸೇರಿದಂತೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 4,314 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯಲ್ಲಿ ಇಂದು 101 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಇಲ್ಲಿಯವರೆಗೆ ಒಟ್ಟು 3086 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಇನ್ನು 1173 ಮಾತ್ರ ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯ 1,118 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 596 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 43797 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 38074 ನೆಗೆಟವ್ ಪ್ರಕರಣ, 4314 ಪಾಸಿಟಿವ್ ಪ್ರಕರಣ ಹಾಗೂ 58 ಜನ ಮೃತಪಟ್ಟಿದ್ದಾರೆ.
ಇಲ್ಲಿವರೆಗೆ ಒಟ್ಟು 196 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 204 ಇದ್ದು, ಇನ್ಸ್ಟಿಟ್ಯೂಶನ್ ಕ್ವಾರಂಟೈನ್ ನಲ್ಲಿದ್ದ 8307 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.