ಬಾಗಲಕೋಟೆ:ಜಿಲ್ಲೆಯಲ್ಲಿ 34 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 168 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಬಾಗಲಕೋಟೆಯಲ್ಲಿಂದು 168 ಕೊರೊನಾ ಪ್ರಕರಣ ಪತ್ತೆ: ಇಬ್ಬರು ಸಾವು - 168 Corona case detected in Bagalkot
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2614ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1238 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2614ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1238 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟ ಸೋಂಕಿತರ ಪೈಕಿ ಬಾಗಲಕೋಟೆ ತಾಲೂಕಿನಲ್ಲಿ 36, ಬಾದಾಮಿ 10, ಹುನಗುಂದ 51, ಬೀಳಗಿ 4, ಮುಧೋಳ 23, ಜಮಖಂಡಿ 44 ಪ್ರಕರಣಗಳು ಕಂಡುಬಂದಿವೆ. ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 228 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 32656 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 29536 ನೆಗೆಟಿವ್ ಪ್ರಕರಣ, 2614 ಪಾಸಿಟಿವ್ ಪ್ರಕರಣ ಹಾಗೂ 52 ಜನ ಮೃತಪಟ್ಟ ಪ್ರಕರಣ ವರದಿಯಾಗಿರುತ್ತದೆ. ಇನ್ನು 1325 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೋನ್ಮೆಂಟ್ ಝೋನ್ 182 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
TAGGED:
Bagalkote news