ಕರ್ನಾಟಕ

karnataka

ETV Bharat / state

ಬಾಗಲಕೋಟೆ: 117 ಜನ ಗುಣಮುಖ, 175 ಕೊರೊನಾ ಸೋಂಕಿತ ಪ್ರಕರಣ ಪತ್ತೆ - Bagalkote latest news

ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8,058 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 6,750 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

Bagalkote
ಬಾಗಲಕೋಟೆ

By

Published : Sep 12, 2020, 9:10 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 117 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 175 ಕೊರೊನಾ ಪ್ರಕರಣಗಳು ಇಂದು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8,058 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 6,750 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 72, ಬಾದಾಮಿ 32, ಹುನಗುಂದ 29, ಬೀಳಗಿ 11, ಮುಧೋಳ 19, ಜಮಖಂಡಿ 12 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 2,963 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 80,751 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 69,418 ನೆಗಟಿವ್ ಪ್ರಕರಣ, 8058 ಪಾಸಿಟಿವ್ ಪ್ರಕರಣ ಹಾಗೂ 85 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 1,223 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 217 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 665 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details