ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಇಂದು ಹೊಸದಾಗಿ 184 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ ಇದೀಗ 1,168ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯಲ್ಲಿ 184 ಜನರಿಗೆ ಸೋಂಕು ದೃಢ... ಓರ್ವ ವೃದ್ಧೆ ಬಲಿ! - ಬಾಗಲಕೋಟೆ ಕೊರೊನಾ ನ್ಯೂಸ್
ಜಿಲ್ಲೆಯಲ್ಲಿಂದು 184 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,168ಕ್ಕೆ ಏರಿಕೆಯಾಗಿದೆ. ಇನ್ನೂ 73 ವರ್ಷದ ಓರ್ವ ವೃದ್ಧೆ ಮಹಾಮಾರಿಗೆ ಬಲಿಯಾಗಿದ್ದಾರೆ.
Bagalakote corona case
ಇನ್ನೂ ಬಾಗಲಕೋಟೆ ನಗರದ 73 ವರ್ಷದ ಓರ್ವ ವೃದ್ಧೆ ಮೃತಪಟ್ಟಿದ್ದು, ಕೋವಿಡ್ ಮಾರ್ಗಸೂಚಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈವರೆಗೆ 507 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 625 ಸಕ್ರಿಯ ಪ್ರಕರಣಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.