ಬಾಗಲಕೋಟೆ :ಜಿಲ್ಲೆಯಲ್ಲಿ 71 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಯಾಗಿದ್ದಾರೆ. ಹೊಸದಾಗಿ 191 ಕೊರೊನಾ ಪ್ರಕರಣ ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,058 ಕೋವಿಡ್ ಪ್ರಕರಣ ದೃಢಪಟ್ಟಿವೆ. ಈ ಪೈಕಿ ಒಟ್ಟು 8,719 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 57, ಬಾದಾಮಿ 21, ಹುನಗುಂದ 57, ಬೀಳಗಿ 20, ಮುಧೋಳ 21, ಜಮಖಂಡಿಯ 15 ಜನರಿಗೆ ಸೋಂಕು ದೃಢಪಟ್ಟಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.