ಬಾಗಲಕೋಟೆ :ಜಿಲ್ಲೆಯಲ್ಲಿ ಇಂದು 207 ಜನರು ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಹೊಸದಾಗಿ 88 ಮಂದಿಗೆ ಸೋಂಕು ದೃಢಪಟ್ಟಿದೆ.
ಗುಣಮುಖ :ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9,632 ಜನರು ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
ಇಂದಿನ ಕೋವಿಡ್ ಮಾಹಿತಿ :ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 23, ಬಾದಾಮಿ 18, ಹುನಗುಂದ 20, ಬೀಳಗಿ 7, ಮುಧೋಳ 12, ಜಮಖಂಡಿ 8 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ ಒಟ್ಟು 10,729 ಪ್ರಕರಣಗಳಿವೆ.