ಬಾಗಲಕೋಟೆ:ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಂದು 125 ಜನ ಗುಣಮುಖರಾಗಿದ್ದು, ಒಟ್ಟಾರೆ 1,134 ಸೋಂಕಿತರು ಗುಣಮುಖರಾಗಿದ್ದಾರೆ.
ಹೊಸದಾಗಿ ಸೋಮವಾರ 209 ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿಯವರೆಗೆ 2,153 ಸೋಂಕಿತ ಪ್ರಕರಣಗಳು ಕಂಡುಬಂದಿವೆ. ಬಾಗಲಕೋಟೆ ತಾಲೂಕಿನಲ್ಲಿ 12, ಬಾದಾಮಿ 24, ಹುನಗುಂದ 41, ಬೀಳಗಿ 27, ಮುಧೋಳ 18 ಮತ್ತು ಜಮಖಂಡಿಯಲ್ಲಿ 87 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 112 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 722 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 29,041 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 26,528 ನೆಗೆಟಿವ್, 2,153 ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಕೊರೊನಾ ಸೋಂಕಿಗೆ 49 ಜನ ಮೃತಪಟ್ಟಿದ್ದಾರೆ.
970 ಮಾತ್ರ ಸಕ್ರಿಯ ಪ್ರಕರಣಗಳಿದ್ದು, ಇಲ್ಲಿವರೆಗೆ 160 ಸ್ಯಾಂಪಲ್‍ಗಳು ರಿಜೆಕ್ಟ್ ಮಾಡಲಾಗಿದೆ . ಕಂಟೈನ್ಮೆಂಟ್ ಝೋನ್ ಸಂಖ್ಯೆ 176 ಆಗಿದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8,237 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.