ಬಾಗಲಕೋಟೆ :ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಫೇಲ್ ಆದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಜರುಗಿದೆ. ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದು ಗ್ರಾಮದ ಹೊರವಲಯದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ - ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಫೇಲ್ ಆದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ..
ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿನಿಯ ಮೃತದೇಹವನ್ನು ಬಾವಿಯಿಂದ ಹೊರ ತೆಗೆಯಲಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಉತ್ತರಕನ್ನಡ : ದ್ವಿತೀಯ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿ ಆತ್ಮಹತ್ಯೆ