ಬಾಗಲಕೋಟೆ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮೂವರು ಕೊನೆಯುಸಿರೆಳೆದಿದ್ದಾರೆ.
ಬಾಗಲಕೋಟೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮೂವರು ಬಲಿ - ಬಾಗಲಕೋಟೆ ಕೊರೊನಾ ಪ್ರಕರಣಗಳು
ಹುನಗುಂದ ತಾಲೂಕಿನ ಇಬ್ಬರು ಮತ್ತು ಬಾಗಲಕೋಟೆ ತಾಲೂಕಿನ ಓರ್ವ ವ್ಯಕ್ತಿ ಇಂದು ಸೋಂಕಿಗೆ ಬಲಿಯಾಗಿದ್ದಾರೆ.
ಹುನಗುಂದ ತಾಲೂಕಿನ ನಿವಾಸಿ (30 ವರ್ಷದ ವ್ಯಕ್ತಿ) ಆಗಸ್ಟ್ 14 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನ್ಯುಮೋನಿಯಾ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 15 ರಂದು ಮೃತಪಟ್ಟಿರುತ್ತಾರೆ. ಹುನಗುಂದದ ಇನ್ನೋರ್ವ ನಿವಾಸಿ (46 ವರ್ಷದ ವ್ಯಕ್ತಿ ) ಆಗಸ್ಟ್ 10 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುತ್ತಾರೆ. ಬಾಗಲಕೋಟೆ ತಾಲೂಕಿನ ಶಿರೂರ ಗ್ರಾಮದ ನಿವಾಸಿ (53 ವರ್ಷದ ವ್ಯಕ್ತಿ) ಆಗಸ್ಟ್ 15 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಂದೇ ಮೃತಪಟ್ಟಿರುತ್ತಾರೆ.
ಮೃತ ವ್ಯಕ್ತಿಗಳನ್ನು ಕೋವಿಡ್ ಮಾರ್ಗಸೂಚಿಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿದೆ. ಕುಟುಂಬದವರೊಂದಿಗೆ ನೇರ ಸಂಪರ್ಕ ಹೊಂದಿರುವವರು ಕೂಡಲೇ ಹತ್ತಿರದ ಸರ್ಕಾರಿ ತಾಲೂಕು ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎನ್. ದೇಸಾಯಿ ತಿಳಿಸಿದ್ದಾರೆ.