ಬಾಗಲಕೋಟೆ: ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು 3 ದಿನಗಳ ಕಾಲ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ, ಯುಪಿಎಸ್ಸಿ, ಕೆಪಿಎಸ್ಸಿ ಹಾಗೂ ಬ್ಯಾಂಕಿಂಗ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಹೆಚ್ಚಿಸಲು ಮತ್ತು ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಮುಂದೆ ಆಯ್ಕೆ ಮಾಡಿಕೊಳ್ಳಬಹುದಾದ ಕೋರ್ಸ್, ಲಭ್ಯವಿರುವ ಅವಕಾಶಗಳು, ವಿವಿಧ ಮಾದರಿಯ ಅಧ್ಯಯನಗಳ ಬಗ್ಗೆ ಮಾರ್ಗದರ್ಶನ ನೀಡುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೋರ್ಸ್ ಮುಗಿಸಿದ ನಂತರ ತೊಡಗಿಸಿಕೊಳ್ಳಬಹುದಾದ ಉದ್ಯೋಗಾವಕಾಶಗಳು, ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.