ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿಂದು ಮೂವರು ಸೋಂಕಿತರು ಗುಣಮುಖ...ಆಸ್ಪತ್ರೆಯಿಂದ ಡಿಸ್ಚಾರ್ಜ್ - ಬಾಗಲಕೋಟೆಯಲ್ಲಿಂದು ಮೂವರು ಕೊರೊನಾ ಸೋಂಕಿತರು ಡಿಸ್ಚಾರ್ಜ್

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಮೂವರು ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲದಿರುವುದು ಸಮಾಧಾನಕರ ಸಂಗತಿಯಾಗಿದೆ.

3 members Discharged from Bagalkot hospital today
ಬಾಗಲಕೋಟೆಯಲ್ಲಿಂದು ಮೂವರು ಸೋಂಕಿತರು ಗುಣಮುಖ

By

Published : May 25, 2020, 8:33 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ವರದಿ ಆಗಿಲ್ಲ. ಆದರೆ ಮೂವರು ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲಾಮಟ್ಟದಲ್ಲಿ ಇದು ಸಮಾಧಾನಕರ ಸಂಗತಿಯಾಗಿದೆ.

ಸೋಂಕಿತರನ್ನು ಬೀಳ್ಕೊಡುತ್ತಿರುವ ಆಸ್ಪತ್ರೆ ಸಿಬ್ಬಂದಿ

ಢಾಣಕಶಿರೂರ ಗ್ರಾಮದ ಓರ್ವ ಬಾಲಕಿ ಸೇರಿದಂತೆ ಮೂವರು ಸೋಂಕಿತರು ಗುಣಮುಖರಾಗಿದ್ದು ಮೂವರನ್ನೂ ಆಸ್ಪತ್ರೆಯಿಂದ ಡಿಸ್ಚಾಜ್೯ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 45 ಆದಂತಾಗಿದೆ. ಢಾಣಕಶಿರೂರ ಗ್ರಾಮದ 16 ವರ್ಷದ ಬಾಲಕಿ ಪಿ-692, 47 ವರ್ಷದ ಪುರುಷ ಪಿ-684, 28 ವರ್ಷದ ಯುವಕ ಪಿ-855 ಸೋಂಕಿನಿಂದ ಗುಣಮುಖರಾದವರು.

ಗುಣಮುಖರಾದವರು ಆಸ್ಪತ್ರೆಯಿಂದ ಬಿಡುಗಡೆಯಾಗುವಾಗ ವೈದ್ಯರು ಹಾಗೂ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ ಶುಭ ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಪ್ರಮಾಣ ಪತ್ರ ವಿತರಿಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಳ್ಳುವಂತೆ ಸೂಚನೆ ನೀಡಿ ಬೀಳ್ಕೊಟ್ಟರು.

ABOUT THE AUTHOR

...view details