ಬಾಗಲಕೋಟೆ:ಜಿಲ್ಲೆಯಲ್ಲಿ 108 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು ಹೊಸದಾಗಿ 77 ಕೊರೊನಾ ಪ್ರಕರಣಗಳು ಹಾಗೂ ಓರ್ವ ಮೃಪಪಟ್ಟ ಪ್ರಕರಣ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 77 ಕೊರೊನಾ ಪ್ರಕರಣ ದೃಢ
ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 7695 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 6504 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 7695 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 6504 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 28, ಬಾದಾಮಿ 16, ಹುನಗುಂದ 6, ಬೀಳಗಿ 6, ಮುಧೋಳ 8, ಜಮಖಂಡಿ 13 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 2251 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 77097 ಸ್ಯಾಂಪಲ್ಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 66839 ನೆಗಟಿವ್ ಪ್ರಕರಣ, 7695 ಪಾಜಿಟಿವ್ ಪ್ರಕರಣ ಹಾಗೂ 84 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1107 ಮಾತ್ರ ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ ಒಟ್ಟು 217 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 665 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.