ಬಾಗಲಕೋಟೆ:ಜಿಲ್ಲೆಯಲ್ಲಿ ಇಂದು 315 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಹೊಸದಾಗಿ 79 ಪ್ರಕರಣ ಪತ್ತೆಯಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಇಂದು 79 ಕೋವಿಡ್ ಪ್ರಕರಣ ಪತ್ತೆ: ಇಬ್ಬರ ಸಾವು
ಬಾಗಲಕೋಟೆಯಲ್ಲಿ ಇಲ್ಲಿಯವರೆಗೆ ಒಟ್ಟು 9,431 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ 8,360 ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 32, ಬಾದಾಮಿ 8, ಹುನಗುಂದ 12, ಬೀಳಗಿ 3, ಮುಧೋಳ 14 ಹಾಗೂ ಜಮಖಂಡಿಯ 10 ಜನರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9,431 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ 8,360 ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 32, ಬಾದಾಮಿ 8, ಹುನಗುಂದ 12, ಬೀಳಗಿ 3, ಮುಧೋಳ 14 ಹಾಗೂ ಜಮಖಂಡಿಯ 10 ಜನರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 2,272 ಸ್ಯಾಂಪಲ್‍ಗಳ ವರದಿಗೆ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 90,003 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 77,793 ನೆಗಟಿವ್ ಪ್ರಕರಣ, 9,431 ಪಾಜಿಟಿವ್ ಪ್ರಕರಣ ಹಾಗೂ 102 ಮೃತ ಪ್ರಕರಣ ವರದಿಯಾಗಿದೆ. ಇನ್ನು 969 ಮಾತ್ರ ಸಕ್ರಿಯ ಪ್ರಕರಣಗಳಿವೆ ಎಂದರು.