ಬಾಗಲಕೋಟೆ :ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕೊರೊನಾಗೆ 80 ವರ್ಷದ ವೃದ್ಧೆ ಬಲಿ, ಜಿಲ್ಲೆಯಲ್ಲಿ ಈವರೆಗೂ 9 ಸಾವು - ಬಾಗಲಕೋಟೆ ಕೊರೊನಾ ಸುದ್ದಿ
ಮೃತ ವೃದ್ಧೆಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇವರು ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ. ಆ ಪ್ರದೇಶವನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದೆ..
ಕೊರೊನಾ
ಬಾಗಲಕೋಟೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವೃದ್ಧೆ ಸಾವನ್ನಪ್ಪಿದ್ದಾರೆ. ಇದು ಜಿಲ್ಲೆಯಲ್ಲಿ ಕೋವಿಡ್ನಿಂದ ವರದಿಯಾದ 9ನೇ ಸಾವು. ಇವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕೋವಿಡ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತ ವೃದ್ಧೆಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇವರು ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ. ಆ ಪ್ರದೇಶವನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದೆ.