ಕರ್ನಾಟಕ

karnataka

ETV Bharat / state

ಬಾಗಲಕೋಟೆ: 83 ಕೊರೊನಾ ಪ್ರಕರಣ ದಾಖಲು, 77 ಜನರು ಗುಣಮುಖ - ಬಾಗಲಕೋಟೆ ಕೊರೊನಾ ಪ್ರಕರಣ

ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನ 27, ಬಾದಾಮಿ 13, ಹುನಗುಂದ 10, ಬೀಳಗಿ 4, ಮುಧೋಳ 20, ಜಮಖಂಡಿ 7 ಹಾಗೂ ಬೇರೆ ಜಿಲ್ಲೆಯ ಇಬ್ಬರು ಇದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

83-new-corona-cases-reported-in-bagalakote
ಬಾಗಲಕೋಟೆ

By

Published : Aug 26, 2020, 2:06 AM IST

ಬಾಗಲಕೋಟೆ:ಜಿಲ್ಲೆಯಲ್ಲಿ ಹೊಸದಾಗಿ 83 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 77 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಲ್ಲಿಯವರೆಗೆ ಒಟ್ಟು 5,335 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4,498 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನ 27, ಬಾದಾಮಿ 13, ಹುನಗುಂದ 10, ಬೀಳಗಿ 4, ಮುಧೋಳ 20, ಜಮಖಂಡಿ 7 ಹಾಗೂ ಬೇರೆ ಜಿಲ್ಲೆಯ ಇಬ್ಬರು ಇದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 889 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 495 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 51,762 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 45,233 ನೆಗೆಟಿವ್ ಪ್ರಕರಣ, 5335 ಪಾಸಿಟಿವ್ ಹಾಗೂ 66 ಜನ ಮೃತರಾಗಿದ್ದಾರೆ.

771 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 210 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿವೆ. 585 ಕಂಟೈನ್ಮೆಂಟ್ ಝೋನ್ ಇದ್ದು, ಇನ್‍ಸ್ಟಿಟ್ಯೂಷನ್​ ಕ್ವಾಂರಂಟೈನ್‍ನಲ್ಲಿದ್ದ 8,455 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details