ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ ಇಂದು 90 ಕೊರೊನಾ ಪ್ರಕರಣಗಳು ದೃಢ ... - Bagalkote Latest Corona News

ಬಾಗಲಕೋಟೆಯಲ್ಲಿ ಹೊಸದಾಗಿ 90 ಕೊರೊನಾ ಪ್ರಕರಣಗಳು ಇಂದು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

Bagalkot
ಬಾಗಲಕೋಟೆ

By

Published : Sep 20, 2020, 10:39 PM IST

ಬಾಗಲಕೋಟೆ:ಜಿಲ್ಲೆಯಲ್ಲಿ 106 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 90 ಕೊರೊನಾ ಪ್ರಕರಣಗಳು ಇಂದು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9,229 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 7,891 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 25, ಬಾದಾಮಿ 15, ಹುನಗುಂದ 22, ಬೀಳಗಿ 3, ಮುಧೋಳ 12, ಜಮಖಂಡಿಯಲ್ಲಿ 13 ಜನರಲ್ಲಿ ಸೋಂಕು ದೃಢಪಟ್ಟಿದ್ದು ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 3,040 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 88,235 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 75,459 ನೆಗಟಿವ್ ಪ್ರಕರಣ, 9,229 ಪಾಸಿಟಿವ್ ಪ್ರಕರಣ ಹಾಗೂ 98 ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 1,241 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿಯವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 714 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details