ಕರ್ನಾಟಕ

karnataka

ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿಂದು 65 ಜನ ಗುಣಮುಖ : 94 ಹೊಸ ಪ್ರಕರಣ ದೃಢ - Bagalkote corona latest news

ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Bagalkote
Bagalkote

By

Published : Oct 19, 2020, 8:53 PM IST

ಬಾಗಲಕೋಟೆ : ಈ ದಿನ ಜಿಲ್ಲೆಯಲ್ಲಿ 65 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು, 94 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ತಾಲೂಕುವಾರು ಕೋವಿಡ್ ವಿವರ :

ಬಾಗಲಕೋಟೆ ತಾಲೂಕಿನಲ್ಲಿ 38, ಬಾದಾಮಿ 22, ಬೀಳಗಿ 4, ಹುನಗುಂದ 8, ಮುಧೋಳ 10, ಜಮಖಂಡಿ 12 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,617 ಕ್ಕೆ ಏರಿಕೆಯಾಗಿದೆ.

ಗುಣಮುಖ :

ಈ ದಿನ ಕೊರೊನಾ ಸೋಂಕಿನಿಂದ 65 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 11,535 ಮಂದಿ ಗುಣಮುಖರಾದಂತಾಗಿದೆ.

ಮೃತರ ಮಾಹಿತಿ :

ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಂದು ಬಲಿಯಾಗಿದ್ದು, ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 127 ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ 956 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪರೀಕ್ಷಾ ವಿವರ :

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,38,665 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,24,231 ನೆಗೆಟಿವ್ ಪ್ರಕರಣಗಳು ವರದಿಯಾಗಿರುತ್ತದೆ.

ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 438 ಇವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ABOUT THE AUTHOR

...view details