ಬಾಗಲಕೋಟೆ:ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಗ್ರಾಮದ ರೈತ ಕೃಷಿಗಾಗಿ ಕರ್ನಾಟಕ ವಿಕಾಸ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ ಸಾಲ ಮಾಡಿದ್ದರು. ಆದರೆ, ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು
ನಿಂಗಪ್ಪ ಪಶ್ಚಾಪೂರ(43) ಎಂಬುವರು ತಮ್ಮ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕೃಷಿಗಾಗಿ ಕರ್ನಾಟಕ ವಿಕಾಸ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಬಿದ್ದ ಮಳೆಯಿಂದಾಗಿ ಬೆಳೆಹಾನಿಯಾಗಿದ್ದು, ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.