ಬಾಗಲಕೋಟೆ: ಕಬ್ಬು ತುಂಬಿದ್ದ ಲಾರಿಯಲ್ಲಿಯೇ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲೂಕಿನ ಕುಳಗೇರ ಕ್ರಾಸ್ ಬಳಿ ನಡೆದಿದೆ.
ಕೈಲಾಸ್ (23) ಆತ್ಮಹತ್ಯೆ ಮಾಡಿಕೊಂಡ ಮಹಾರಾಷ್ಟ್ರ ಮೂಲದ ಲಾರಿ ಚಾಲಕ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಇವರಗಾಂವ್ ಗ್ರಾಮದ ನಿವಾಸಿಯಾಗಿದ್ದ ಚಾಲಕ, ಕಬ್ಬು ತುಂಬಿಕೊಂಡು ಕಾರ್ಖಾನೆಗೆ ನೀಡಲು ಬಂದಿದ್ದ. ಬಯಲು ಪ್ರದೇಶದಲ್ಲಿ ವಾಹನ ನಿಲ್ಲಿಸಿ, ರಾತ್ರಿ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕುಳಗೇರಿ ಉಪ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.