ಬಾಗಲಕೋಟೆ:ಮಹಿಳೆಯರನ್ನು ಕೊಠಡಿಯಲ್ಲಿ ಕೂಡಿಹಾಕಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗುತ್ತಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಯುವಕರು ಥಳಿಸಿರುವ ಘಟನೆ ನಡೆದಿದೆ.
ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 31ರಲ್ಲಿ ಈ ಘಟನೆ ನಡೆದಿದೆ.
ಬಾಗಲಕೋಟೆ:ಮಹಿಳೆಯರನ್ನು ಕೊಠಡಿಯಲ್ಲಿ ಕೂಡಿಹಾಕಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗುತ್ತಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಯುವಕರು ಥಳಿಸಿರುವ ಘಟನೆ ನಡೆದಿದೆ.
ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 31ರಲ್ಲಿ ಈ ಘಟನೆ ನಡೆದಿದೆ.
ಡಿಆರ್ ಪೊಲೀಸ್ ಪೇದೆ ತುಕಾರಾಂ ರಾಠೋಡ ಎಂಬಾತ ಅಮಾಯಕ ಮಹಿಳೆಯರಿಗೆ ಪ್ರಾರ್ಥನೆ ಮಾಡುವಂತೆ ತಿಳಿಸುವ ಜೊತೆಗೆ ಏಸುವಿನ ಬಗ್ಗೆ ಮಾಹಿತಿ ನೀಡುತ್ತಾ ಮತಾಂತರಗೊಳಿಸಲು ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಸುದ್ದಿ ತಿಳಿದ ಬಂಜಾರಾ ಸಮಾಜದ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಹೂವಪ್ಪ ರಾಠೋಡ ಹಾಗೂ ಹಿಂದೂಪರ ಸಂಘಟನೆ ಮುಖಂಡರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಥಳಿಸಿ ಆಕ್ರೋಶ ವ್ಯಕ್ತಪಡಿಸಿದ್ರು.
ನವನಗರ ಪೊಲೀಸರು ಸುರಕ್ಷತೆ ದೃಷ್ಟಿಯಿಂದ ಮತಾಂತರ ಮಾಡ್ತಿದ್ದವರನ್ನು ಕಳುಹಿಸಿಕೊಟ್ಟಿದ್ದಾರೆ. ಅಲ್ಲದೇ, ಮತಾಂತರಗೊಳಿಸಲು ಮುಂದಾದ ಜನರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವಕರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಭರವಸೆ ಕೊಟ್ಟರು.