ಕರ್ನಾಟಕ

karnataka

ETV Bharat / state

ಮುಧೋಳದಲ್ಲಿ ಮತ್ತೊಂದು ಕೊರೊನಾ ದೃಢ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆ - ಬಾಗಲಕೋಟೆ ಸುದ್ದಿ

ಪಿ-865 ವ್ಯಕ್ತಿಯ ದ್ವಿತೀಯ ಸಂಪರ್ಕ ಹೊಂದಿದ್ದ ಮುಧೋಳದ 21 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.

Another corona case detected in mudhol
ಮುಧೋಳದಲ್ಲಿ ಮತ್ತೋರ್ವ ಮಹಿಳೆಗೆ ಕೊರೊನಾ..ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆ

By

Published : May 16, 2020, 12:19 PM IST

ಬಾಗಲಕೋಟೆ:ಜಿಲ್ಲೆಯ ಮುಧೋಳದಲ್ಲಿ ಮತ್ತೋರ್ವ ಮಹಿಳೆಗೆ ಕೊವೀಡ್-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.

ಪಿ-865 ವ್ಯಕ್ತಿಯ ದ್ವಿತೀಯ ಸಂಪರ್ಕ ಹೊಂದಿದ್ದ ಮುಧೋಳದ 21 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಜಿಲ್ಲೆಯಿಂದ ಒಟ್ಟು 71 ಸ್ಯಾಂಪಲ್‍ಗಳನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ 70 ಸ್ಯಾಂಪಲ್‍ಗಳು ನೆಗೆಟಿವ್ ಬಂದರೆ, ಒಂದು ಮಾತ್ರ ಪಾಸಿಟಿವ್ ಬಂದಿದೆ. ಮತ್ತೆ ಜಿಲ್ಲೆಯಿಂದ ಹೊಸದಾಗಿ 112 ಸ್ಯಾಂಪಲ್‍ಗಳನ್ನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಪ್ರತ್ಯೇಕವಾಗಿ ನಿಗಾದಲ್ಲಿ 892 ಜನರಿದ್ದು, ಇನ್​ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿ 1251 ಜನರಿದ್ದಾರೆ. ಇಲ್ಲಿಯವರೆಗೆ ಒಟ್ಟು 4,677 ಮಂದಿಯ ಸ್ಯಾಂಪಲ್‍ಗಳನ್ನ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 4,480 ನೆಗೆಟಿವ್ ಹಾಗೂ 70 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ.

ABOUT THE AUTHOR

...view details