ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ ಮತ್ತೊಂದು ಕೊರೊನಾ ದೃಢ

ಇಂದು ಬಾಗಲಕೋಟೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಿವಾಸಿ 33 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

Another corona case registered in Bagalkote
ಬಾಗಲಕೋಟೆಯಲ್ಲಿ ಮತ್ತೊಬ್ಬನಿಗೆ ಕೊರೊನಾ ಸೋಂಕು

By

Published : May 16, 2020, 3:41 PM IST

ಬಾಗಲಕೋಟೆ:ಇಂದು ಮತ್ತೊಬ್ಬ ವ್ಯಕ್ತಿಗೆ ಕೊರೊನಾ ತಗುಲಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಿವಾಸಿ 33 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಈತ ಏ. 12ರಂದು ಗ್ರಾಮಕ್ಕೆ ಬಂದಿದ್ದ. ಕುಳಗೇರಿ ಕ್ರಾಸ್​​ನಲ್ಲಿ ಕ್ವಾರಂಟೈನ್​ನಲ್ಲಿ ಇಡಲಾಗಿತ್ತು. ಬಳಿಕ ಮೇ 14ರಂದು ನಗರದಲ್ಲಿರುವ ಕೋವಿಡ್​​ ಆಸ್ಪತ್ರೆಗೆ ಕರೆ ತಂದು ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದವರ ಕುರಿತಂತೆ ವೈದ್ಯಕೀಯ ಸಿಬ್ಬಂದಿಯಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ರೋಗಿ ನಂ-1063ಗೆ ಪಾಸಿಟಿವ್​ ಬಂದಿದ್ದು, ಟ್ರಾವೆಲ್ ಹಿಸ್ಟರಿಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ABOUT THE AUTHOR

...view details