ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕು ಕೇಂದ್ರವಾಗಿ ಒಂದೂವರೆ ವರ್ಷವಾದರೂ ಸೂಕ್ತ ಸ್ಥಾನಮಾನ ನೀಡಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮುಧೋಳ ತಾಲೂಕಿನ ಮಹಾಲಿಂಗಪುರ ಆರಕ್ಷಕಠಾಣಾ ವ್ಯಾಪ್ತಿಯ10 ಗ್ರಾಮಗಳನ್ನು ಬನಹಟ್ಟಿಯ ಹಿರಿಯ ದಿವಾಣಿ ನ್ಯಾಯಾಲಯ ಮತ್ತು ದಿವಾಣಿ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾವಣೆ ಮಾಡಬೇಕೆಂದು ಬನಹಟ್ಟಿ ವಕೀಲರ ಸಂಘದಿಂದ ಗೃಹ ಸಚಿವ ಎಂ.ಬಿ. ಪಾಟೀಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬನಹಟ್ಟಿ ವಕೀಲರ ಸಂಘದಿಂದ ಗೃಹ ಸಚಿವ ಎಂ.ಬಿ. ಪಾಟೀಲ್ಗೆ ಮನವಿ - undefined
ಮುಧೋಳ ತಾಲೂಕಿನ ಮಹಾಲಿಂಗಪುರ ಆರಕ್ಷಕಠಾಣಾ ವ್ಯಾಪ್ತಿಯ10 ಗ್ರಾಮಗಳನ್ನು ಬನಹಟ್ಟಿಯ ಹಿರಿಯ ದಿವಾಣಿ ನ್ಯಾಯಾಲಯ ಮತ್ತು ದಿವಾಣಿ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾವಣೆ ಮಾಡಬೇಕೆಂದು ಬನಹಟ್ಟಿ ವಕೀಲರ ಸಂಘದಿಂದ ಗೃಹ ಸಚಿವ ಎಂ.ಬಿ. ಪಾಟೀಲರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಬನಹಟ್ಟಿ ವಕೀಲರ ಸಂಘದ ಸದಸ್ಯರು ಗೃಹ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ವಕೀಲರ ಸಂಘದ ಸದಸ್ಯರ ಮನವಿ ಸ್ವೀಕರಿಸಿ ಮಾತನಾಡಿದ ಗೃಹ ಸಚಿವರು, ಈ ಕುರಿತು ಪರಿಶೀಲಿಸಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ನೀಡಿದರು. ಅಲ್ಲದೆ ಸರ್ಕಾರಿ ಹುದ್ದೆಗಳನ್ನು ಸಹಿತ ಸೃಷ್ಟಿಸಬೇಕೆಂದು ಇದೇ ಸಂದರ್ಭದಲ್ಲಿ ವಕೀಲರ ಸಂಘದ ಸದಸ್ಯರು ಒತ್ತಾಯಿಸಿದರು.
ನಿಯೋಗದ ನೇತೃತ್ವವನ್ನು ಬನಹಟ್ಟಿ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪುಟಾಣಿ, ಶಿವಗೌಡ ಪಾಟೀಲ್, ಎಸ್.ಎಸ್. ಷಣ್ಮುಖ, ರವಿ ಸಂಪಗಾವಿ, ಬಿ. ಎಂ. ಅಥಣಿ, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಬಸವರಾಜ ಕೊಕಟನೂರ ಉಪಸ್ಥಿತರಿದ್ದರು.