ಬಾಗಲಕೋಟೆ: ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಜಿಲ್ಲೆಯ ಮಹಾಲಿಂಗಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಗಲಕೋಟೆ: ಖತರ್ನಾಕ್ ಬೈಕ್ ಕಳ್ಳನ ಬಂಧನ - ಮಹಾಲಿಂಗಪುರ ಠಾಣೆ
ಖತರ್ನಾಕ್ ಬೈಕ್ ಕಳ್ಳನೋರ್ವನನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1.20 ಲಕ್ಷ ರೂ. ಮೌಲ್ಯದ ಹೀರೋ ಕಂಪನಿಯ ನಾಲ್ಕು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೈಕ್ ಕಳ್ಳತನ
ಬಾಳಪ್ಪ ಈರಪ್ಪ ಪಾಟೀಲ ಬಂಧಿತ. ಈತ ಮುಧೋಳ, ಜಮಖಂಡಿ ಸೇರಿದಂತೆ ವಿವಿಧ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಬಂಧಿತನಿಂದ ಒಟ್ಟು 1.20 ಲಕ್ಷ ರೂ. ಮೌಲ್ಯದ ಹೀರೋ ಕಂಪನಿಯ ನಾಲ್ಕು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ.