ಬಾಗಲಕೋಟೆ:ಪ್ರತಿ ತಿಂಗಳ ಗೌರವಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ: ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - bagalkot news
ಪ್ರತಿ ತಿಂಗಳ ಗೌರವಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ: ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಆಶಾಕಾರ್ಯಕರ್ತೆಯರ ಪ್ರತಿಭಟನೆ
ಕೋವಿಡ್ ವೈರಸ್ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವನದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ 12 ಸಾವಿರ ರೂಪಾಯಿಗಳವರೆಗೆ ವೇತನ ನಿಗದಿಗೊಳಿಸಬೇಕು. ಅಲ್ಲದೆ ಸುರಕ್ಷತಾ ಸಾಮಗ್ರಿಗಳನ್ನ ವಿತರಣೆ ಮಾಡಬೇಕು ಎಂಬ ವಿವಿಧ ಬೇಡಿಕೆಗಳ ಮನವಿ ಪತ್ರವನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರವಾಗಿ ನಿಮ್ಮ ಬೇಡಿಕೆ ಈಡೇರಲಿದೆ. ನೀವು ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದರು.