ಕರ್ನಾಟಕ

karnataka

ETV Bharat / state

ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ - Achieved Staff

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Award Distribution to Achieved Staff
ಸಾಧನೆ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ ವಿತರಣೆ

By

Published : Aug 28, 2020, 9:36 PM IST

ಬಾಗಲಕೋಟೆ:ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2019-20 ಹಾಗೂ ಪ್ರಸಕ್ತ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ವಿವಿಧ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿ.ಪಂ. ಸಿಇಓ ಟಿ.ಭೂಬಾಲನ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್​ನಲ್ಲಿ ಇಂದು ನಡೆದ ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ, ಸಿಬ್ಬಂದಿ ಹಾಗೂ ಮೇಟ್ಸ್ ಸೇರಿದಂತೆ 23 ಜನರಿಗೆ ಪ್ರಶಸ್ತಿ ನೀಡಿ ಭೂಬಾಲನ ಗೌರವಿಸಿದರು.

ಇನ್ನೂ ಉತ್ತಮ ಸಾಧನೆ ಮಾಡುವಂತೆ ಪ್ರೇರಣೆ ನೀಡುವುದು ಅಗತ್ಯವಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ABOUT THE AUTHOR

...view details