ಬಾಗಲಕೋಟೆ: ಅನಧಿಕೃತ ಬಡಾವಣೆಯಲ್ಲಿ ನಿವೇಶನ ಖರೀದಿಸಬಾರದು ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಸಲಿಂಗಪ್ಪ ನಾವಲಗಿ ತಿಳಿಸಿದ್ದಾರೆ.
ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅನಧಿಕೃತ ಬಡಾವಣೆಯಲ್ಲಿ ನಿವೇಶನ ಖರೀದಿಸಬಾರದು ಎಂದು ಜಾಗೃತಿ ಮೂಡಿಸಲಾಗುವುದು. ಜೊತೆಗೆ ನಗರದ ಸುತ್ತಮುತ್ತಲಿನ ಜಮೀನು ಸೇರಿದಂತೆ ಸುಮಾರು 20 ಗ್ರಾಮಗಳಲ್ಲಿ ಯೋಜನಾ ಪ್ರಾಧಿಕಾರಕ್ಕೆ ಒಳಪಡಿಸುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದರು.