ಬೆಂಗಳೂರು : ಬಾಗಲಕೋಟೆಯ ಕಿರೆಸೂರ ಗ್ರಾಮದಲ್ಲಿ ಮಳೆಯ ಅವಾಂತರದಿಂದ ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಬಾಗಲಕೋಟೆ: ಮನೆ ಕುಸಿದು ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ - ಡಿಸಿಎಂ ಗೋವಿಂದ ಕಾರಜೋಳ
ಕಿರೆಸೂರ ಗ್ರಾಮದಲ್ಲಿ ಮಳೆಯ ಅವಾಂತರದಿಂದ ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಅಂತ್ಯಸಂಸ್ಕಾರದ ಖರ್ಚು ವೆಚ್ಚ ಭರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನೆ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಅಂತ್ಯಸಂಸ್ಕಾರದ ಖರ್ಚು ವೆಚ್ಚ ಭರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನೆ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ನಿರಂತರ ಮಳೆ ಬರುತ್ತಿರುವ ಹಿನ್ನೆಲೆ, ಮಣ್ಣಿನ ಮನೆಯಲ್ಲಿರುವವರು ಬೇರೆ ಮನೆಗೆ ಸ್ಥಳಾಂತರ ಆಗಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮೃತ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.