ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 108 ಜನ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ಹೊಸದಾಗಿ 76 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಕೊರೊನಾ ಸೋಂಕಿನಿಂದ 108 ಜನ ಗುಣಮುಖ - bagalakote today corona
ಬಾಗಲಕೋಟೆಯಲ್ಲಿ ಶುಕ್ರವಾರ 108 ಸೋಂಕಿರು ಗುಣಮುಖರಾಗಿ ನಾನಾ ಕೋವಿಡ್ ಕೇಂದ್ರ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಅವಧಿಯಲ್ಲಿ 76 ಹೊಸ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,364 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 10,609 ಸೋಂಕಿತರು ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 14, ಬಾದಾಮಿ 14, ಹುನಗುಂದ 17, ಬೀಳಗಿ 3, ಮುಧೋಳ 17 ಹಾಗೂ ಜಮಖಂಡಿಯ 15 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗಿದ್ದ 1240 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,22,833 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,09,718 ನೆಗಟಿವ್, 11,364 ಪಾಸಿಟಿವ್ ಹಾಗೂ 116 ಮೃತ ಪ್ರಕರಣಗಳು ವರದಿಯಾವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.