ಬಾಗಲಕೋಟೆ:ಜಿಲ್ಲೆಯಲ್ಲಿ ಇಂದು 158 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 135 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ: 158 ಜನ ಗುಣಮುಖ: 135 ಹೊಸ ಪ್ರಕರಣಗಳು ದೃಢ - 158 people cured from coron
ಬಾಗಲಕೋಟೆಯಲ್ಲಿ ಸೋಂಕಿತರ ಸಂಖ್ಯೆ 3342ಕ್ಕೆ ಏರಿಕೆಯಾಗಿದ್ದು, ಹೊಸದಾಗಿ 135 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇಂದು 158 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3342ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 2133 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 936 ಜನರ ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 37051 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 32491 ನೆಗೆಟಿವ್ ಬಂದಿದ್ದು, 3342 ಪಾಜಿಟಿವ್ ಪ್ರಕರಣ ಹಾಗೂ 55 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇನ್ನು 1156 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿವೆ. ಕಂಟೈನ್ಮೆಂಟ್ ಝೋನ್ 159 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.