ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 671 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 234 ಕೊರೊನಾ ಪ್ರಕರಣಗಳು ಗುರುವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ: 671 ಜನ ಗುಣಮುಖ... 234 ಹೊಸ ಪ್ರಕರಣಗಳು ದೃಢ - 671 people have corona
ಬಾಗಲಕೋಟೆ ಜಿಲ್ಲೆಯಲ್ಲಿ 671 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಇನ್ನು 1069 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8781 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 7619 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 57, ಬಾದಾಮಿ 41, ಹುನಗುಂದ 41, ಬೀಳಗಿ 12, ಮುಧೋಳ 38, ಜಮಖಂಡಿ 45 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 2783 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 85881 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 73810 ನೆಗಟಿವ್ ಪ್ರಕರಣ, 8781 ಪಾಸಿಟಿವ್ ಪ್ರಕರಣ ಹಾಗೂ 93 ಮೃತಪಟ್ಟ ಪ್ರಕರಣ ವರದಿಯಾಗಿರುತ್ತದೆ. ಇನ್ನು 1069 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. 665ಕಂಟೈನ್ಮೆಂಟ್ ಝೋನ್ ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.