ಬಾಗಲಕೋಟೆ:ಜಿಲ್ಲೆಯಲ್ಲಿ 71 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿ ತೆರಳಿದ್ದಾರೆ. ಇದೇ ವೇಳೆ ಹೊಸದಾಗಿ 68 ಕೊರೊನಾ ಪ್ರಕರಣಗಳು ಹಾಗೂ ಎರಡು ಮೃತ ಪ್ರಕರಣಗಳು ಇಂದು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ 71 ಮಂದಿ ಗುಣಮುಖ, 68 ಹೊಸ ಪ್ರಕರಣಗಳು ದೃಢ - Number of corona infected in Bagalkot
ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10641 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9425 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 12, ಬಾದಾಮಿ 8, ಹುನಗುಂದ 20, ಬೀಳಗಿ 6, ಮುಧೋಳ 11, ಜಮಖಂಡಿ 11 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
![ಬಾಗಲಕೋಟೆ: ಜಿಲ್ಲೆಯಲ್ಲಿ 71 ಮಂದಿ ಗುಣಮುಖ, 68 ಹೊಸ ಪ್ರಕರಣಗಳು ದೃಢ Bagalkot: 71 new cases, 68 new cases confirmed](https://etvbharatimages.akamaized.net/etvbharat/prod-images/768-512-9025776-thumbnail-3x2-ss.jpg)
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10641 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9425 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 12, ಬಾದಾಮಿ 8, ಹುನಗುಂದ 20, ಬೀಳಗಿ 6, ಮುಧೋಳ 11, ಜಮಖಂಡಿ 11 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1509 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 109646 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 94987 ನೆಗಟಿವ್ ಪ್ರಕರಣ, 10641 ಪಾಸಿಟಿವ್ ಪ್ರಕರಣ ಹಾಗೂ 109 ಮೃತ ಪ್ರಕರಣ ವರದಿಯಾಗಿರುತ್ತವೆ. ಇನ್ನು 1107 ಮಾತ್ರ ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಹಾಗೇ 438 ಕಂಟೈನ್ಮೆಂಟ್ ಝೋನ್ ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.