ಬಾಗಲಕೋಟೆ: ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಅಧ್ಯಕ್ಷೆಯಾಗಿ ಜ್ಯೋತಿ ಭಂಜತ್ರಿ, ಉಪಾಧ್ಯಕ್ಷರಾಗಿ ಬಸವರಾಜ್ ಅವರಾದಿ ಆಯ್ಕೆ ಆಗಿದ್ದಾರೆ.
ಬಾಗಲಕೋಟೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ - Bagalkot Municipal Council President and Vice President elected unanimous
ನಗರಸಭೆಯಲ್ಲಿ ಬಿಜೆಪಿ ಪಕ್ಷವು 30 ಸದಸ್ಯರನ್ನು ಹೊಂದಿ ಬಹುಮತ ಪಡೆದ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮಹಿಳಾ ಮೀಸಲಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಪ್ರಕಟವಾಗಿತ್ತು.
ನಗರಸಭೆಯಲ್ಲಿ ಬಿಜೆಪಿ ಪಕ್ಷವು 30 ಸದಸ್ಯರನ್ನು ಹೊಂದಿ ಬಹುಮತ ಪಡೆದ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮಹಿಳಾ ಮೀಸಲಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ತಲಾ ಒಂದೂಂದು ನಾಮಪತ್ರ ಸಲ್ಲಿಸಲಾಗಿತ್ತು. ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ರಾಜೇಂದ್ರ ಅವಿರೋಧ ಆಯ್ಕೆ ಘೋಷಣೆ ಮಾಡಿ, ದಾಖಲಾತಿಯ ಫೈಲ್ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.
ಕಳೆದ ಎರಡು ವರ್ಷಗಳಿಂದಲೂ ಸದಸ್ಯರಾಗಿದ್ದರೂ ಅಧಿಕಾರ ಭಾಗ್ಯ ಸಿಕ್ಕಿರಲಿಲ್ಲ. ಈಗ ಅಧಿಕಾರ ಭಾಗ್ಯ ಸಿಕ್ಕ ಹಿನ್ನೆಲೆ ಶಾಸಕ ವೀರಣ್ಣ ಚರಂತಿಮಠ ಅವರ ಮಾರ್ಗದರ್ಶನ ಮೂಲಕ ಅಧಿಕಾರ ಸ್ವೀಕಾರ ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ವೀರಣ್ಣ ಚರಂತಿಮಠ ಮಾತನಾಡಿ, ಪಕ್ಷದಲ್ಲಿ ನಿಷ್ಠಾವಂತರಾಗಿ ಕೆಲಸ ಮಾಡಿದವರನ್ನು ಗುರುತಿಸಿ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ನಗರದಲ್ಲಿ 35 ವಾರ್ಡ್ಗಳಿದ್ದು, ಎಲ್ಲಾ ವಾರ್ಡ್ಗಳಿಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ಮೊದಲ ಆದ್ಯತೆ ನೀಡಿ ಎಂದು ಅಧ್ಯಕ್ಷ, ಉಪಾಧ್ಯಕ್ಷರಿಗೆ ತಿಳಿಸಿದರು.