ಬಾಗಲಕೋಟೆ:ಮಹಾತ್ಮಾ ಗಾಂಧಿಜೀಯವರ ಜಯಂತಿ ನಿಮಿತ್ತ ಕರವೇ ಸಂಘಟನೆ ಹಾಗೂ ರೈತ ಸಂಘಟನೆಯಿಂದ ಸರದಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ: ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ - Protest as part of Mahatma Gandhi's jayanthi
ಮಹಾತ್ಮಾ ಗಾಂಧಿಜೀಯವರ ಜಯಂತಿ ನಿಮಿತ್ತ ಕರವೇ ಸಂಘಟನೆ ಹಾಗೂ ರೈತ ಸಂಘಟನೆಯಿಂದ ಸರದಿ ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಡಳಿತ ಭವನದ ಹೊರಗಡೆ ವೇದಿಕೆ ನಿರ್ಮಾಣ ಮಾಡಿ, ಸರದಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜೀಯವರ ಜಯಂತಿ ನಿಮಿತ್ತ ವೇದಿಕೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ, ಕರವೇ ಮುಖಂಡರಾದ ರಮೇಶ ಬದನ್ನೂರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿಗೆ ತರುತ್ತಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ರೈತರ ನೂತನ ಕಾಯ್ದೆ ಜಾರಿಗೆ ತರದೇ ಈ ಕೂಡಲೇ ನಿರ್ಧಾರ ಹಿಂದಕ್ಕೆ ಪಡೆಯಬೇಕು. ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧೀಜಿಯವರು ಶಾಂತಿಯುತವಾಗಿ ಹೋರಾಟ ನಡೆಸಿದ್ದರು. ಅದೇ ಮಾದರಿಯಲ್ಲಿ ಅವರ ಜಯಂತಿಯ ದಿನವೇ ಶಾಂತಿಯುತವಾದ ಪ್ರತಿಭಟನೆ ಹಮ್ಮಿಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದರು.