ಬಾಗಲಕೋಟೆ:ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿ ರಿಪಬ್ಲಿಕ್‌ನ ಕರ್ನಾಟಕ ಸೇನಾ ಪ್ರಾದೇಶಿಕ ಹಾಗೂ ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ: ಹಥ್ರಾಸ್ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ - Bagalkot Protest Latest News Update
ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿ ರಿಪಬ್ಲಿಕ್‌ನ ಕರ್ನಾಟಕ ಸೇನಾ ಪ್ರಾದೇಶಿಕ ಹಾಗೂ ಅಂಬೇಡ್ಕರ್ ಸೆನಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ: ಹಥ್ರಾಸ್ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸುವ ಮೂಲಕ ಉತ್ತರ ಪ್ರದೇಶದಲ್ಲಿ ವಾಲ್ಮೀಕಿ ಸಮಾಜದ ಹೆಣ್ಣು ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಕೂಡಲೇ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೋರಿ ರಾಷ್ಟ್ರೀಯ ರಿಪಬ್ಲಿಕ್‌ನ ಕರ್ನಾಟಕ ಸೇನಾ ಪ್ರಾದೇಶಿಕ ಹಾಗೂ ಅಂಬೇಡ್ಕರ್ ಸೇನಾ ವತಿಯಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.