ಬಾಗಲಕೋಟೆ: ಜನ ಶಿಕ್ಷಣ ಸಂಸ್ಥೆ ಹಾಗೂ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಶುಕ್ರವಾರ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಿಸಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಶಾಸಕರಾದ ವೀರಣ್ಣ ಚರಂತಿಮಠ ಸಮ್ಮುಖದಲ್ಲಿ ಮೋದಿ ಸಂವಾದ ಕಾರ್ಯಕ್ರಮವನ್ನು ಮಕ್ಕಳು ವೀಕ್ಷಣೆ ಮಾಡಿದರು.
ಈ ಕುರಿತು ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ, ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ಮೋದಿ ಅವರು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮೂಡಿಸುವ ಮಾತುಗಳನ್ನಾಡಿದ್ದಾರೆ. ಮಕ್ಕಳಲ್ಲಿ ಮಾನಸಿಕ ಒತ್ತಡ ಹಾಗೂ ಭಯ ಹೋಗಲಾಡಿಸಿ ಧೈರ್ಯ ತುಂಬುವ ಕೆಲಸ ಮಾಡಿದರು ಎಂದರು. ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ನಾಗರತ್ನ ಮಾತನಾಡಿ, ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.