ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಚುನಾವಣೆ ನವೆಂಬರ್ 3 ರಂದು ನಡೆಯಲಿರುವ ಹಿನ್ನೆಲೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹುನಗುಂದ ಕ್ಷೇತ್ರದಿಂದ ಡಿಸಿಸಿ ಬ್ಯಾಂಕಿಗೆ ಆಯ್ಕೆ ಆಗುವ ಸಲುವಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಚುನಾವಣೆ: ವಿಜಯಾನಂದ ಕಾಶಪ್ಪನವರ ನಾಮಪತ್ರ ಸಲ್ಲಿಕೆ - bagalkote latest news
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹುನಗುಂದ ಕ್ಷೇತ್ರದಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಆಗಲು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯ ಆಯಾ ತಾಲೂಕಿನ ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆಯುವ ಎಲೆಕ್ಷನ್ ಇದಾಗಿದೆ.

ಈಗಾಗಲೇ ಬಿಜೆಪಿ ಪಕ್ಷದಿಂದ ಬಸವೇಶ್ವರ ಬ್ಯಾಂಕ್ ಅಧ್ಯಕ್ಷರಾದ ಪ್ರಕಾಶ ತಪಶೆಟ್ಟಿ ಹಾಗೂ ಶಾಸಕ ಸಿದ್ದು ಸವದಿ ಅವರ ಸಹೋದರ ಏಗಪ್ಪ ಸವದಿ ಸೇರಿದಂತೆ ಇತರರು ಪ್ರಮುಖರಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹಿಂದಿನ ಅಧ್ಯಕ್ಷರಾದ ಅಜೇಯ ಕುಮಾರ ಸರನಾಯಕ, ಶಿವಾನಂದ ಉದಪುಡಿ, ಹೆಚ್.ವೈ.ಮೇಟಿ ಹಾಗೂ ವಿಜಯಾನಂದ ಕಾಶಪ್ಪನವರ ಪ್ರಮುಖರಾಗಿದ್ದಾರೆ.
ಡಿಸಿಸಿ ಬ್ಯಾಂಕಿಗೆ ಈ ಸಲ ಘನಾನುಘಟಿಗಳು ಸ್ಪರ್ಧೆಗೆ ಇಳಿದಿರುವ ಹಿನ್ನೆಲೆ ಚುನಾವಣೆ ಪತಿಷ್ಠೆಯ ಕಣವಾಗಿದೆ. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹುನಗುಂದ ಕ್ಷೇತ್ರದಿಂದ ಡಿಸಿಸಿ ಬ್ಯಾಂಕಿಗೆ ಆಯ್ಕೆ ಆಗಲು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಸಮಯದಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಆರ್.ಪಾಟೀಲ ಸಾಥ್ ನೀಡಿರುವುದು ಕಾಂಗ್ರೆಸ್ ಪಕ್ಷದ ಬಲ್ಯಾಡ ಪ್ರದರ್ಶನ ನೀಡಲು ಕಾರಣವಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದ ವಿಜಯಾನಂದ ಕಾಶಪ್ಪನವರ ಈಗ ಒಗ್ಗಟ್ಟು ಮಂತ್ರ ಜಪಿಸುವ ಮೂಲಕ ಮತ್ತೆ ಹೇಗಾದರೂ ಅಧಿಕಾರ ಹಿಡಿಯುವ ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.