ಬಾಗಲಕೋಟೆ:ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಮೇಘ ಮೈತ್ರಿ ಕನ್ನಡ ಮತ್ತು ಸಾಹಿತ್ಯ ವೇದಿಕೆ ವತಿಯಿಂದ ಸಾಧಕರಿಗೆ ಮೇಘ ಮೈತ್ರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೆಂಕಟೇಶ ಇನಾಂದಾರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗರ ಮೇಘ ಮೈತ್ರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಹಿರಿಯ ರಂಗಭೂಮಿ ಕಲಾವಿದರು ಹಾಗೂ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಾತಾ ಮಂಜಮ್ಮ ಜೋಗುತಿ, ಹಿರಿಯ ರಂಗಭೂಮಿ ಕಲಾವಿದರು ಹಾಗೂ ಖ್ಯಾತ ಚಲನಚಿತ್ರ ಹಾಸ್ಯ ನಟರಾದ ವೈಜನಾಥ ಬಿರಾದಾರ, ಖ್ಯಾತ ಗಜಲ್ ಕವಿ ಅಲ್ಲಾಗಿರಿರಾಜ ಕನಕಗಿರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.