ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮ ಬಳಿ ಇರುವ ಜೆ ಕೆ ಸಿಮೆಂಟ್ ಕಾರ್ಖಾನೆಯಿಂದ ಸ್ಥಳೀಯರಿಗೆ ಹಾಗೂ ರೈತರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.
ಮೆಟಗುಡ್ಡ, ನಿಂಗಾಪೂರ ಹಾಗೂ ಹಲಕಿ ಗ್ರಾಮದ ಜಮೀನುಗಳಿಗೆ ತೊಂದರೆ ಉಂಟಾಗುತ್ತಿದೆ. ಸಿಮೆಂಟ್ ಕಾರ್ಖಾನೆಯವರು ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ. ಇದರಿಂದಾಗಿ ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ. ಇದರ ಜತೆಗೆ ಮನೆಗಳು ಸಹ ಬಿರುಕುಗೊಂಡು ಸ್ಥಳೀಯರು ಆತಂಕ ಪಡುವಂತಾಗಿದೆ.
ಕಾರ್ಖಾನೆ ಆಡಳಿತ ಮಂಡಳಿಯವರು ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವುದಾಗಿ ಜಮೀನು ಪಡೆದಿದ್ದಾರೆ. ಆದರೆ, ಸ್ಥಳೀಯರಿಗೆ, ಕನ್ನಡಿಗರಿಗೆ ಉದ್ಯೋಗ ನೀಡದೆ, ಬೇರೆಯವರಿಗೆ ಉದ್ಯೋಗ ನೀಡುತ್ತಿದ್ದಾರೆ.