ಬಾಗಲಕೋಟೆ: ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಯನ್ನು ಒಂದು ದಿನದ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ.
ಸಿಬ್ಬಂದಿಗೆ ಕೊರೊನಾ: ತಹಶೀಲ್ದಾರ್ ಕಚೇರಿ ಸೀಲ್ ಡೌನ್ - ಬಾಗಲಕೋಟೆ ಲೆಟೆಸ್ಟ್ ನ್ಯೂಸ್
ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಯನ್ನು ಒಂದು ದಿನದ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ. ಸರ್ಕಾರಿ ಕೆಲಸ ಕಾರ್ಯಗಳು ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ.
Bagalakote corona case
ಇತ್ತೀಚೆಗೆ ಸರ್ಕಾರಿ ನೌಕರರಲ್ಲೂ ಕೊರೊನಾ ಪತ್ತೆಯಾಗುತ್ತಿರುವ ಪರಿಣಾಮ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುತ್ತಿದೆ. ತಹಶೀಲ್ದಾರ್, ಸಬ್ ರಿಜಿಸ್ಟ್ರಾರ್ ಹಾಗೂ ಉಪ ವಿಭಾಗಾಧಿಕಾರಿ ಇರುವ ಮಿನಿ ವಿಧಾನಸೌಧಕ್ಕೆ ಕೊರೊನಾ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ. ಒಂದು ದಿನದ ಮಟ್ಟಿಗೆ ಸರ್ಕಾರಿ ಕೆಲಸ ಕಾರ್ಯಗಳು ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ.