ಬಾಗಲಕೋಟೆ: ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಕೊರೊನಾ ಸೋಂಕಿನಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಗುಣಮುಖ - ಬಾಗಲಕೋಟೆ ಲೆಟೆಸ್ಟ್ ನ್ಯೂಸ್
ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಹತ್ತು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆ ನಗರದ ಎಸ್.ನಿಜಲಿಂಗಪ್ಪ ಕುಮಾರೇಶ್ವರ ಮೆಡಿಕಲ್ ಕಾಲೇಜ್ನ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರ ಪತ್ನಿ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ಗೂ ಸಹ ಸೋಂಕು ದೃಢಪಟ್ಟಿದ್ದು ಇಬ್ಬರೂ ಸಹ ಅದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಇಬ್ಬರೂ ಸಹ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹುನಗುಂದದಿಂದ ಕಾಶಪ್ಪನವರ್ ಆಪ್ತರು, ಅಭಿಮಾನಿಗಳು, ಬೆಂಬಲಿಗರು ಆಗಮಿಸಿ, ಮಾರ್ಲಾಪಣೆ ಮಾಡಿ, ಹೂ ಮಾಲೆ ಹಾಕಿ ಸ್ವಾಗತಿಸಿದರು.