ಬಾಗಲಕೋಟೆ:ಜಿಲ್ಲೆಯಾದ್ಯಂತ ಡಿಸೆಂಬರ್ 11 ರಿಂದ 31 ವರೆಗೆ ಹಮ್ಮಿಕೊಂಡ ವಿಶೇಷ ಶಾಲಾ ಮಕ್ಕಳ ಲಸಿಕಾ ಅಭಿಯಾನಕ್ಕೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.
ಶಾಲಾ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಯಕ್ಕ ಮೇಟಿ
ಡಿಸೆಂಬರ 11 ರಿಂದ 31 ವರೆಗೆ ವಿಶೇಷ ಶಾಲಾ ಮಕ್ಕಳ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಬಾಗಲಕೋಟೆಯಲ್ಲಿ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ ಚಾಲನೆ ನೀಡಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಂಟಲಮುರಿ, ನಾಯಿ ಕೆಮ್ಮು ಮತ್ತು ಧನುರ್ವಾಯು ರೋಗವನ್ನು ತಡೆಗಟ್ಟುವ ಲಸಿಕೆ ಇದಾಗಿದ್ದು, ತಪ್ಪದೇ ಮಕ್ಕಳು ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ತಾಲೂಕ್ ಪಂಚಾಯತಿ ಅಧ್ಯಕ್ಷರಾದ ಚನ್ನಗೌಡ ಪರನಗೌಡರ ಮಾತನಾಡಿ, ರೋಗ ಬಾರದಂತೆ ಮುನ್ನೆಚ್ಚರಿಕೆಯಾಗಿ ಈ ಲಸಿಕೆಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಲಸಿಕೆ ಹಾಕಲು ಶಾಲೆಗೆ ಬಂದಾಗ ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು. ಅಲ್ಲದೇ ಮಕ್ಕಳಲ್ಲಿ ಸೇವಿಸುವ ಆಹಾರ ಪದ್ದತಿ ಕೂಡಾ ಹಿತಮಿತವಾಗಿರಬೇಕು ಎಂದು ಸಲಹೆ ನೀಡಿದ್ರು.