ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಹಿನ್ನೆಲೆ, ಬಾದಾಮಿ ಮತಕ್ಷೇತ್ರದಲ್ಲಿ ಅವರ ಆಪ್ತರು ವಿಶೇಷವಾಗಿ ಹುಟ್ಟುಹಬ್ಬ ಆಚರಣೆ ಮಾಡಿ ಗಮನ ಸೆಳೆದರು.
ಸಿದ್ದರಾಮಯ್ಯನವ್ರ ಹುಟ್ಟು ಹಬ್ಬದ ಅಂಗವಾಗಿ ಬಾಗಲಕೋಟೆಯಲ್ಲಿ ರಕ್ತದಾನ ಶಿಬಿರ - ಸಿದ್ದರಾಮಯ್ಯನವರ ಹುಟ್ಟು ಹಬ್ಬ
ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಹಿನ್ನೆಲೆ, ಆಪ್ತರಾಗಿರುವ ಹೊಳಬಸು ಶೆಟ್ಟರ್ ನೇತೃತ್ವದಲ್ಲಿ ಬನಶಂಕರಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಬಳಿಕ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
![ಸಿದ್ದರಾಮಯ್ಯನವ್ರ ಹುಟ್ಟು ಹಬ್ಬದ ಅಂಗವಾಗಿ ಬಾಗಲಕೋಟೆಯಲ್ಲಿ ರಕ್ತದಾನ ಶಿಬಿರ Siddaramaiah birthday celebration in Bagalakote](https://etvbharatimages.akamaized.net/etvbharat/prod-images/768-512-04:05:27:1597228527-kn-bgk-01-xcm-siddu-brithday-av-script-7202182-12082020160108-1208f-1597228268-634.jpg)
Siddaramaiah birthday celebration in Bagalakote
ಆಪ್ತರಾಗಿರುವ ಹೊಳಬಸು ಶೆಟ್ಟರ್ ಅವರ ನೇತೃತ್ವದಲ್ಲಿ, ವಿವಿಧ ಮುಖಂಡರು ಬಾದಾಮಿ ಬನಶಂಕರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಸಿದ್ದರಾಮಯ್ಯನವರ ಕಚೇರಿಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಿಲಾಗಿತ್ತು. ಅನೇಕ ಯುವಕರು ಮುಂದೆ ಬಂದು ರಕ್ತದಾನ ಮಾಡಿದರು. ಇದೇ ವೇಳೆ ಕಚೇರಿಯ ಆವರಣದಲ್ಲಿ ಸಿದ್ದರಾಮಯ್ಯನವರ ಭಾವಚಿತ್ರದ ಮುಂದೆ ಕೇಕ್ ಕತ್ತರಿಸಿ, ಸಂಭ್ರಮಿಸಿದರು.