ಬಾಗಲಕೋಟೆ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾದಾಮಿ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ ಹಮ್ಮಿಕೊಳ್ಳುವ ಮೂಲಕ ರಾಜಕೀಯವಾಗಿ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಇಂದು ಬಾದಾಮಿ ಮತಕ್ಷೇತ್ರದ ಮುಷ್ಟಿಗೇರಿ ಗ್ರಾಮಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ ಧರ್ಮಸ್ಥಳ ಮಂಜುನಾಥ ಸಂಘದಿಂದ 12 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಿರುವ ಕರೆ ಕಾಮಗಾರಿ ವೀಕ್ಷಣೆ ಮಾಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಾದಾಮಿ ತಾಲೂಕಿನಲ್ಲಿ ಮಳೆ ಆಗಿಲ್ಲ. ಗೋ ಶಾಲೆ ತೆರೆದಿಲ್ಲ. ಮೇವು ಬ್ಯಾಂಕ್ ಮಾಡಿದ್ದರೂ. ಎಷ್ಟು ವಿತರಣೆ ಆಗಿದೆ ಎಂಬುದಕ್ಕೆ ಲೆಕ್ಕ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಳೆ ಇಲ್ಲದೆ ಭೀಕರ ಬರಗಾಲ ಎದುರಾಗಿದ್ದು, ಎಷ್ಟರ ಮಟ್ಟಿಗೆ ಸರ್ಕಾರ ಪರಿಹಾರ ಕಾರ್ಯ ಕೈಗೊಂಡಿದೆ ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆಸಲಾಗಿದೆ. ಪ್ರಭಾವಿ ನಾಯಕರ ಕ್ಷೇತ್ರ ಆಗಿದ್ದರಿಂದ ಬರ ಪರಿಹಾರದ ಬಗ್ಗೆ ಮಾಹಿತಿ ಪಡೆಯಲು ಆಗಮಿಸಿದ್ದೇನೆ ಎಂದು ಬಿಎಸ್ವೈ ಹೇಳಿದರು.
ಮಧ್ಯಂತರ ಚುನಾವಣೆಗೆ ಸಜ್ಜಾಗಿ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್ವೈ, ಹೀಗೆ ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಮಧ್ಯಂತರ ಚುನಾವಣೆ ನಡೆಯಲು ಬಿಜೆಪಿ ಅವಕಾಶ ನೀಡಲ್ಲ.105 ಜನ ಬಿಜೆಪಿ ಶಾಸಕರು ಇದ್ದೇವೆ. ಈಗ ಮತ್ತೆ ಒಂದೇ ವರ್ಷ ದಲ್ಲಿ ಚುನಾವಣೆ ನಡೆಸಲು ಅವಕಾಶ ಕೊಡಲ್ಲ. ಸರ್ಕಾರ ನಡೆಸಲು ಯೋಗ್ಯತೆ ಇಲ್ಲದಿದ್ರೆ ಮನೆಗೆ ಹೋಗಲಿ, ರಾಜ್ಯದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡುತ್ತದೆ ಎಂದರು.