ಕರ್ನಾಟಕ

karnataka

ETV Bharat / state

ಸರ್ಕಾರಿ ಶಾಲೆಗಳಲ್ಲಿ ಕೈತೋಟ ನಿರ್ಮಿಸಿ : ಬಾಯಕ್ಕ ಮೇಟಿ ಅಧಿಕಾರಿಗಳಿಗೆ ಸೂಚನೆ

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿಂದು ಜರುಗಿದ ಜಿ.ಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ, ನೀರಿನ ಸೌಕರ್ಯವಿರುವ ಸರ್ಕಾರಿ ಶಾಲೆಗಳಲ್ಲಿ ಪೌಷ್ಠಿಕ ಕೈತೋಟ ನಿರ್ಮಿಸಲು ಕ್ರಮಕೈಗೊಳ್ಳುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

By

Published : Sep 11, 2020, 8:32 PM IST

ಜಿ.ಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಜಿ.ಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಬಾಗಲಕೋಟೆ: ನರೇಗಾ ಯೋಜನೆಯಡಿ ಸ್ಥಳಾವಕಾಶ, ಕಾಂಪೌಂಡ್ ಗೋಡೆ ಹಾಗೂ ನೀರಿನ ಸೌಕರ್ಯವಿರುವ ಸರ್ಕಾರಿ ಶಾಲೆಗಳಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಕ್ರಮಕೈಗೊಳ್ಳುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿಂದು ಜರುಗಿದ ಜಿ.ಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಆಯುಕ್ತರು ಅನುಮತಿಸಿದ್ದು, ಅವರ ನಿರ್ದೇಶನದಂತೆ ಕೈತೋಟ ನಿರ್ಮಾಣಕ್ಕೆ ಅಗತ್ಯವಿರುವ ಸೌಲಭ್ಯಗಳು ಹೊಂದಿದ ಶಾಲೆಗಳ ಪಟ್ಟಿಯನ್ನು ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಬಿರಾದಾರ ಅವರಿಗೆ ಸೂಚಿಸಿದರು.

ಶಾಲೆಗಳ ಪಟ್ಟಿ ಪಡೆದ ನಂತರ ಮಕ್ಕಳಿಗೆ ಉಪಯೋಗವಾಗುವಂತಹ ಗಿಡಗಳನ್ನು ತೋಟಗಾರಿಕೆ, ಅರಣ್ಯ ಇಲಾಖೆಯವರು ಒದಗಿಸುವಂತೆ ತಿಳಿಸಿದರು. ತೆಂಗು, ಚಿಕ್ಕು, ಸೀತಾಫಲ ಸೇರಿದಂತೆ ಇತರೆ ಹಣ್ಣಿನ ಗಿಡಗಳನ್ನು ಬೆಳೆಸಲು ತಿಳಿಸಿದರು. ನಂತರ ಕೃಷಿ, ತೋಟಗಾರಿಕೆ, ಅರಣ್ಯ, ಪಶುಪಾಲನೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕ್ರೀಡೆ, ಜಿಲ್ಲಾ ಕೈಗಾರಿಕೆ, ಸಹಕಾರ, ಆರೋಗ್ಯ ಇಲಾಖೆ, ಸಹಕಾರ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿ.ಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಸರಿಯಾಗಿ ಮಾಶಾಸನ ಜಮಾ ಆಗುತ್ತಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ತಿಳಿಸಿದರು. ಅಲ್ಲದೇ ತಾಡಪತ್ರೆ ವಿತರಣೆಯಲ್ಲಿ ಸಮಸ್ಯೆ ಇರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಕ್ರಮಕೈಗೊಳ್ಳಲು ತಿಳಿಸಿದಾಗ ಈ ಬಾರಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವುದರಿಂದ ಯಾವುದೇ ಸಮಸ್ಯೆಯಾಗುವದಿಲ್ಲವೆಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿಗೆ ಶೇ.70 ರಷ್ಟು ಬೀಜ ಶೇ.103 ರಷ್ಟು ರಸಗೊಬ್ಬರ ವಿತರಿಸಲಾಗಿದೆ. ಶೇ.100 ಸಸ್ಯ ಸಂರಕ್ಷಣಾ ಔಷಧಿ, ಸಾವಿರ ಕಿರು ಪೊಟ್ಟಣ ವಿತರಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆಯಲ್ಲಿ ಕೇಂದ್ರ ವಲಯದಲ್ಲಿ ಶೇ.77 ರಷ್ಟು, ರಾಜ್ಯ ವಲಯದಲ್ಲಿ ಶೇ.70 ರಷ್ಟು ಸಾಧನೆ ಮಾಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.

ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ವಾರ್ಷಿಕ ಗುರಿಗೆ ಶೇ.97 ರಷ್ಟು ಪ್ರಗತಿ ಸಾಧಿಸಲಾಗಿದೆ. ಸ್ವ-ಸಹಾಯ ಗುಂಪುಗಳಿಗೆ ನೀಡುವ ಸ್ವತ್ತುನಿಧಿಯಲ್ಲಿ 360 ಗುರಿಗೆ 360 ಸಾಧನೆ ಮಾಡಲಾಗಿದೆ. ಸಂಜೀವಿನಿ, ಎನ್.ಆರ್.ಎಲ್.ಎಂ ದಿಂದ ಅನುದಾನ ಬಿಡುಗಡೆಗೆ ಬಾಕಿ ಇರುವುದಾಗಿ ಜಿ.ಪಂ ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ ತಿಳಿಸಿದರು.

ABOUT THE AUTHOR

...view details