ಕರ್ನಾಟಕ

karnataka

ETV Bharat / state

'ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್, ಜೆಡಿಎಸ್ ನಾಯಕರಿಗಿಲ್ಲ' - Bagalkot news

ಆರ್​ಎಸ್​ಎಸ್ ಬಗ್ಗೆ ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆಸ್, ಜೆಡಿಎಸ್ ನಾಯಕರಿಗಿಲ್ಲ. ಆರ್‌ಎಸ್‌ಎಸ್‌ ದೇಶದಲ್ಲಿಯೇ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

B.Y.Vijayendra
ಬಿ.ವೈ.ವಿಜಯೇಂದ್ರ

By

Published : Oct 22, 2021, 9:26 AM IST

ಬಾಗಲಕೋಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಿನ್ನೆ ಸಿಂದಗಿ ಉಪಚುನಾವಣೆ ಪ್ರಚಾರಕ್ಕೆ ಹೋಗುವ ಮುನ್ನ ಇಳಕಲ್ಲ ಪಟ್ಟಣಕ್ಕೆ ಭೇಟಿ ನೀಡಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

ಅಮ್ಮಾ ಸೇವಾ ಸಂಸ್ಥೆ, ವಿಜಯ ಮಾಹಾಂಶ ಶ್ರೀಗಳ ಮಠ, ಮಾಜಿ ಮುಖ್ಯಮಂತ್ರಿ ದಿವಗಂತ ಕಂಠಿ ಅವರ ಪುತ್ಥಳಿಗೆ ಭೇಟಿ ನೀಡಿದರು. ತದ ನಂತರ ಶಾಸಕ ದೊಡ್ಡನಗೌಡ ಪಾಟೀಲ ಅವರು ಮನೆಗೆ ಭೇಟಿ ನೀಡಿ ಪಾನೀಯ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ ವಿಜಯೇಂದ್ರ, ಆರ್​ಎಸ್ಎಸ್ ಬಗ್ಗೆ ಹೆಚ್​ಡಿಕೆ ಆರೋಪ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಮಾತನಾಡಿದ ಬಿ.ವೈ ವಿಜಯೇಂದ್ರ

ಆರ್​ಎಸ್​ಎಸ್ ಬಗ್ಗೆ ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆಸ್, ಜೆಡಿಎಸ್ ನಾಯಕರಿಗಿಲ್ಲ. ಸಂಘ ದೇಶದಲ್ಲಿಯೇ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಯುವಕರಿಗೆ ಆರ್​ಎಸ್ಎಸ್ ಪ್ರೇರಣೆ ನೀಡುತ್ತಿದೆ. ಚುನಾವಣೆ ಬಂದ ಹಿನ್ನೆಲೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ತಮ್ಮ ಪಕ್ಷದ ಸಾಧನೆಗಳ ಬಗ್ಗೆ ಮತದಾರರಿಗೆ ಹೇಳಬೇಕು. ನಮ್ಮ ಪಕ್ಷ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿದ್ರೆ ಈ ಎರಡೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details