ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ ನಾಳೆ ಮದ್ಯ ಮಾರಾಟಕ್ಕೆ ಅವಕಾಶ - Bagalkot District

ಬಾಗಲಕೋಟೆಯಲ್ಲಿ ಡಿಸೆಂಬರ್​ 31ರಂದು ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಹೇಳಿದ್ದಾರೆ.

chance to sell liquor at Bagalkotti tomorrow: DC Dr K. Rajendra
ಬಾಗಲಕೋಟೆಯಲ್ಲಿ ನಾಳೆ ಮದ್ಯ ಮಾರಾಟಕ್ಕೆ ಅವಕಾಶ

By

Published : Dec 30, 2020, 3:01 PM IST

ಬಾಗಲಕೋಟೆ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಡಿಸೆಂಬರ್​ 31ರ ವರೆಗೆ ಮದ್ಯ ಮಾರಾಟ ನಿಷೇಧ ಮಾಡಿದ್ದ ಆದೇಶವನ್ನು ಹಿಂದಕ್ಕೆ ಪಡೆದು, 30ರ ರಾತ್ರಿ 12 ಗಂಟೆಯವರೆಗೆ ನಿಷೇಧ ಆದೇಶ ಸೀಮಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ನಾಳೆ ಮದ್ಯ ಮಾರಾಟಕ್ಕೆ ಅವಕಾಶ

ನಗರದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದ ನಂತರ ವಿಜಯೋತ್ಸವದ ವೇಳೆ ಗಲಾಟೆ ಉಂಟಾಗಬಹುದು ಎಂಬ ಕಾರಣದಿಂದ ಡಿಸೆಂಬರ್ 31ರವರೆಗೆ ಮದ್ಯ ನಿಷೇಧ ಮಾಡಲಾಗಿತ್ತು. ಆದರೆ ಹೊಸ ವರ್ಷದ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಜನರ ಅಪೇಕ್ಷೆ ಮೇರೆಗೆ ಬದಲಾವಣೆ ಮಾಡಿಕೊಳ್ಳಲಾಗಿದೆ. ಆದರೆ ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ 191 ಗ್ರಾಮ ಪಂಚಾಯತಿ ಚುನಾವಣೆಯ ಮತ ಏಣಿಕೆ ಶಾಂತಿಯುತವಾಗಿ ನಡೆಯುತ್ತಿದ್ದು, ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದರು.

ABOUT THE AUTHOR

...view details