ಬಾಗಲಕೋಟೆ:ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆರೋಗ್ಯ ಹಸ್ತ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್ ಚಾಲನೆ ನೀಡಿದರು.
ಗಾಂಧಿ ಕುಟುಂಬದವರೇ ಅಧ್ಯಕ್ಷರಾಗಲಿ ಅನ್ನುವುದು ನನ್ನ ವೈಯುಕ್ತಿಕ ಅಭಿಪ್ರಾಯ: ಎಸ್.ಆರ್. ಪಾಟೀಲ್ - sr patil reaction on aicc president selection
ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಹಸ್ತ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್ ಗಾಂಧಿ ಕುಟುಂಬದ ಯಾರೇ ಅಧ್ಯಕ್ಷರಾದ್ರೂ ಜವಾಬ್ದಾರಿ ನಿಭಾಯಿಸುವ ಶಕ್ತಿ ಇದೆ. ಆದ್ದರಿಂದ ಅದೇ ಕುಟುಂಬದವರಾಗಲಿ ಎನ್ನೋದು ನನ್ನ ವೈಯುಕ್ತಿಕ ಅಭಿಪ್ರಾಯ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬ ಸ್ವಾತಂತ್ರ್ಯ ಪೂರ್ವ ಕಾಲದಿಂದಲೂ ದೇಶಕ್ಕಾಗಿ ತ್ಯಾಗ ಮಾಡಿದ ಕುಟುಂಬ, ದೇಶ ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ಶಿಕ್ಷೆ ಅನುಭವಿಸಿದವರು, ದೇಶಕ್ಕಾಗಿ ಎಲ್ಲವನ್ನ ತ್ಯಾಗ ಮಾಡಿದ ಗಾಂಧಿ ಕುಟುಂಬದ ಯಾರೇ ಅಧ್ಯಕ್ಷರಾದ್ರೂ ಜವಾಬ್ದಾರಿ ನಿಭಾಯಿಸುವ ಶಕ್ತಿ ಇದೆ. ಆದ್ದರಿಂದ ಅದೇ ಕುಟುಂಬದವರಾಗಲಿ ಎನ್ನೋದು ನನ್ನ ವೈಯುಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡುತ್ತಾ, ಎಐಸಿಸಿ ಕಮಿಟಿ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದನ್ನ ನಾನು ಸ್ವಾಗತ ಮಾಡುತ್ತೇನೆ ಎಂದರು.
ಫೋನ್ ಟ್ಯಾಪಿಂಗ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್.ಆರ್.ಪಾಟೀಲ್, ದೇಶದ ದೊಡ್ಡ-ದೊಡ್ಡ ಸ್ವಾಯುತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ಐಟಿ ಸೇರಿದಂತೆ ಅನೇಕ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಂಡವರಿಗೆ ಫೋನ್ ಟ್ಯಾಪಿಂಗ್ ದೊಡ್ಡ ವಿಚಾರ ಅಲ್ಲ ಎಂದು ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಮಯದಲ್ಲಿ ಕೊರೊನಾ ವಾರಿಯರ್ಸ್ಗೆ ಆರೋಗ್ಯ ಕಿಟ್ ವಿತರಣೆ ಮಾಡಿದರು.